ಮಂಗಳೂರು: ತಾಪಮಾನ ಏರಿಕೆ ಜಾಗತಿಕ ಸಮಸ್ಯೆಯಾ ಗಿದ್ದು ಇದನ್ನು ನಿಯಂತ್ರಿಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಇದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಮಟ್ಟಿಗೆ ಪರಿಸರ ಉಳಿವಿಗೆ ಪ್ರಯತ್ನಿಸುವುದರ ಮೂಲಕ ಹಸಿರು ನಮ್ಮೆಲ್ಲರ ಉಸಿರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಎಕ್ಸ್‌ಪರ್ಟ್ ವಳಚ್ಚಿಲ್ ಕಾಲೇಜಿನಲ್ಲಿ ಶುಕ್ರವಾರ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಸಂಘ ಸಂಸ್ಥೆಗಳು ತಮ್ಮ ಪರಿಸರದಲ್ಲಿ ಗಿಡ ನೆಡುವ ಅಭಿಯಾನ ಕೈಗೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರ್ಪೊರೇಟ್ ಕಂಪನಿಗಳು ಪರಿಸರ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ, ಕಾರ್ಯಕ್ರಮ ಗಳನ್ನು ಆಯೋಜಿ ಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು.
ಮೌಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡಲು ಗಟ್ಟಿ ಮನಸ್ಸು ಬೇಕು. ಎಕ್ಸ್ ಪರ್ಟ್ ಸಂಸ್ಥೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಶಿಕ್ಷಣ ನೀಡುತ್ತಿದೆ ಎಂದು ಶ್ಲಾಘಿಸಿದರು. ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉಷಾಪ್ರಭಾ ನಾಯಕ್, ಟ್ರಸ್ಟಿಗಳಾದ ಉಸ್ತಾದ್ ರಫೀಕ್ ಖಾನ್, ಮಂಜುನಾಥ್ ಕಾಮತ್, ಜಗನ್ನಾಥ ಕಾಮತ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಜನೆಟ್, ಝೀನತ್ ಉಪಸ್ಥಿತರಿದ್ದರು. ನಿಖಿಲ್ ಎಂ.ಎಲ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಮಾರು 300 ಗಿಡಗಳನ್ನು ಕಾಲೇಜಿನ ಪರಿಸರದಲ್ಲಿ ನೆಡಲಾಯಿತು.